ಹೈದರಾಬಾದ್: ಕೊರೋನಾ ಸೋಂಕು ತಡೆಯಲು ಲಾಕ್ಡೌನ್ ಮುಂದುವರೆಸಲಾಗಿದೆ. ಆದರೂ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ತೆಲಂಗಾಣದಲ್ಲಿ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ.
ಹಿಂದಿನ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆದಿರುವ ಅಂಕ ಮತ್ತು ಆಂತರಿಕ ಮೌಲ್ಯಮಾಪನವನ್ನು ಆಧರಿಸಿ ವಿದ್ಯಾರ್ಥಿಗಳಿಗೆ ಅಂಕ ನೀಡಲಿದ್ದು ಇದರ ಆಧಾರದಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಪಾಸ್ ಮಾಡಲಾಗುವುದು.
ತೆಲಂಗಾಣದಲ್ಲಿ 5.34 ಲಕ್ಷ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆಯಬೇಕಿತ್ತು. ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರ 10 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲು ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.