
ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಬಂಧಿತರು ಐಎಸ್ಐ ಏಜೆಂಟ್ ಮೊಹಮ್ಮದ್ ಖಾಸಿಂ ಸೂಚನೆಯಂತೆ ಕೆಲಸ ಮಾಡುತ್ತಿದ್ದರು.
ಪಾಕಿಸ್ತಾನದ ಐಎಸ್ಐ ಏಜೆಂಟ್ ಮೊಹಮ್ಮದ್ ಖಾಸಿಂ ಸೂಚನೆಯಂತೆ ಕೆಲಸ ಮಾಡುತ್ತಿದ್ದ ಒಬ್ಬ ಸರ್ಕಾರಿ ನೌಕರ, ಕೂಲಿ ಕಾರ್ಮಿಕ ಮತ್ತು ವ್ಯಾಪಾರಿಯನ್ನು ಬಂಧಿಸಲಾಗಿದೆ.
ಬಂಧಿತರ ಬ್ಯಾಂಕ್ ಖಾತೆ ಪರಿಶೀಲನೆ ವೇಳೆಯಲ್ಲಿ ಬೇನಾಮಿ ವ್ಯಕ್ತಿಗಳ ಜೊತೆ ವಹಿವಾಟು ನಡೆಸಿರುವುದು ಪತ್ತೆಯಾಗಿದೆ. ಇವರು ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿರುವ ಮಾಹಿತಿ ಕಲೆ ಹಾಕಿ ಬಂಧಿಸಲಾಗಿದೆ.