ಜಮ್ಮು- ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕ ದಾಳಿ ನಡೆದಿದೆ. ಕುಲ್ಗಂನಲ್ಲಿ ಸರ್ಪಂಚ್ ಸಜ್ಜಾದ್ ಅಹ್ಮದ್ ಖಂಡೆಯನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಖಂಡೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಭಾರತೀಯ ಜನತಾ ಪಕ್ಷದ ನಾಯಕ ಖಂಡೆಯನ್ನು ಮನೆಯ ಹೊರಗೆ ಭಯೋತ್ಪಾದಕರು ಗುಂಡಿಕ್ಕಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಇದಕ್ಕೂ ಮುನ್ನ ಜೂನ್‌ನಲ್ಲಿ ಕಾಶ್ಮೀರಿ ಪಂಡಿತ್ ಸರ್ಪಂಚ್ ಅಜಯ್ ಪಂಡಿತಾ ಅವರನ್ನು ಕೊಲೆ ಮಾಡಲಾಗಿತ್ತು.