![](https://kannadadunia.com/wp-content/uploads/2020/07/kerala-village-sea-water.jpg)
ಕೇರಳದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸಮುದ್ರ ತೀರದ ಗ್ರಾಮವೊಂದಕ್ಕೆ ಸಮುದ್ರದ ನೀರು ನುಗ್ಗಿದೆ.
ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಕೊಚ್ಚಿ ಪ್ರದೇಶದ ಚೆಲ್ಲಂ ಗ್ರಾಮಕ್ಕೆ ಸಮುದ್ರದ ನೀರು ನುಗ್ಗಿದೆ. ಗ್ರಾಮದ ರಸ್ತೆಗಳಲ್ಲಿ ಪ್ರವಾಹ ಉಂಟಾಗಿದ್ದು, ಊರಿಗೇ ಊರೇ ಜಲಾವೃತಗೊಂಡಿದೆ. ಇದರಿಂದಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಮೊದಲೇ ಈ ಗ್ರಾಮದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡಿದೆ. ಗ್ರಾಮದಲ್ಲಿ 200 ಕ್ಕೂ ಹೆಚ್ಚು ಸೋಂಕಿತರಿದ್ದು, ಕಠಿಣ ಲಾಕ್ ಡೌನ್ ಜಾರಿ ಮಾಡಲಾಗಿದೆ. ಹೀಗಿರುವಾಗಲೇ ಸಮುದ್ರವೇ ಊರಿಗೆ ನುಗ್ಗಿ ಅವಾಂತರ ಸೃಷ್ಠಿಸಿದೆ.