alex Certify BIG BREAKING: 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಫಿಕ್ಸ್

ದೇಶದಲ್ಲಿ ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಏಪ್ರಿಲ್​ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ನಿರ್ಧರಿಸಿದೆ.

ಕೇಂದ್ರ ಕ್ಯಾಬಿನೆಟ್​ ಸಭೆಯಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರವನ್ನ ಕೈಗೊಂಡಿದೆ.

ಇನ್ನು ಈ ಸಂಬಂಧ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ ಜಾವ್ಡೇಕರ್​ ದೇಶದಲ್ಲಿ ಅವಶ್ಯಕತೆ ಇರುವಷ್ಟರ ಮಟ್ಟಿಗೆ ಕೊರೊನಾ ಲಸಿಕೆಗಳ ದಾಸ್ತಾನು ಲಭ್ಯವಿದೆ ಎಂದು ಹೇಳಿದ್ದಾರೆ .

ದೇಶದಲ್ಲಿ ಪ್ರಸ್ತುತ 60 ವರ್ಷ ಮೇಲ್ಪಟ್ಟ ಎಲ್ಲಾ ವೃದ್ಧರಿಗೆ ಹಾಗೂ 45 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮಾತ್ರ ಕೊರೊನಾ ಲಸಿಕೆಯನ್ನ ನೀಡಲಾಗುತ್ತಿತ್ತು. ಇದೀಗ ಹೊಸ ನಿಯಮದ ಪ್ರಕಾರ ಕೇಂದ್ರ ಸರ್ಕಾರ ಏಪ್ರಿಲ್​ 1ನೇ ತಾರೀಖಿನಿಂದ 45 ವರ್ಷ ಮೇಲ್ಪಟ್ಟ ದೇಶದ ಪ್ರತಿಯೊಬ್ಬ ಜನತೆಗೆ ಕೊರೊನಾ ಲಸಿಕೆಯನ್ನ ಪೂರೈಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...