alex Certify BIG NEWS: ಹಿರಿಯರು, ಮಕ್ಕಳು, ಗರ್ಭಿಣಿಯರಿಗೆ ಬಸ್ ಪ್ರಯಾಣ ಬ್ಯಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿರಿಯರು, ಮಕ್ಕಳು, ಗರ್ಭಿಣಿಯರಿಗೆ ಬಸ್ ಪ್ರಯಾಣ ಬ್ಯಾನ್

ಮುಂಬೈ: ಕೊರೋನಾ ರುದ್ರತಾಂಡವಕ್ಕೆ ಮಹಾರಾಷ್ಟ್ರದ ಜನ ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಮಹಾರಾಷ್ಟ್ರ ರಸ್ತೆ ಸಾರಿಗೆ ನಿಗಮ ಬಸ್ ಸಂಚಾರವನ್ನು ಆರಂಭಿಸಿದೆ.

ಷರತ್ತಿಗೆ ಒಳಪಟ್ಟು ಬಸ್ ಸಂಚಾರ ಆರಂಭಿಸಲಾಗಿದ್ದು ಬಸ್ ಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯರು, 10 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಪ್ರಯಾಣ ನಿಷೇಧಿಸಲಾಗಿದೆ. ಕಳೆದ 4 ದಿನಗಳಿಂದ ಮಹಾರಾಷ್ಟ್ರದಲ್ಲಿ ಹಂತಹಂತವಾಗಿ ಬಸ್ ಸಂಚಾರ ಆರಂಭಿಸಲಾಗಿದೆ. ಪ್ರತಿ ಬಸ್ ನಲ್ಲಿ 22 ಕ್ಕಿಂತ ಹೆಚ್ಚು ಪ್ರಯಾಣಿಕರು ಪ್ರಯಾಣಿಸಲು ಅವಕಾಶ ಇರುವುದಿಲ್ಲ.

ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬುದು ಸೇರಿದಂತೆ ಹಲವು ನಿಬಂಧನೆಗಳೊಂದಿಗೆ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮಕ್ಕಳು, ಹಿರಿಯರು ಮತ್ತು ಗರ್ಭಿಣಿಯರಿಗೆ ಬಸ್ ನಲ್ಲಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ. ಮಹಾರಾಷ್ಟ್ರದಲ್ಲಿ 50,231 ಮಂದಿಗೆ ಕೊರೋನಾ ಸೋಂಕು ತಗಲಿದ್ದು, 1635 ಜನ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...