ಚೆನ್ನೈ: ಮಹತ್ವದ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಏರ್ ಗುಪ್ತಚರ ವಿಭಾಗದ ಅಧಿಕಾರಿಗಳು 2.16 ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶ ಪಡಿಸಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ ವಿಮಾನಗಳ ಮೂಲಕ ಚೆನ್ನೈಗೆ ಆಗಮಿಸಿದ ಮೂವರನ್ನು ಬಂಧಿಸಲಾಗಿದೆ. ಹಿರಿಯ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಚಿನ್ನ ಕಳ್ಳಸಾಗಣೆ ಪ್ರಕರಣಗಳ ಬಗ್ಗೆ ಗುಪ್ತಚರ ವಿಭಾಗ ವಿಶೇಷ ಜಾಗರೂಕತೆ ವಹಿಸಿದೆ.
ಶುಕ್ರವಾರ ಎರಡು ವಿಮಾನಗಳಲ್ಲಿ ದುಬೈನಿಂದ ಆಗಮಿಸಿದ 14 ಮಂದಿಯನ್ನು ತಪಾಸಣೆ ನಡೆಸಲಾಗಿದೆ. ಅನುಮಾನದ ಮೇಲೆ ಕೆಲವರನ್ನು ಪರಿಶೀಲನೆ ನಡೆಸಲಾಗಿದೆ. ಹಲವರು ಗುದನಾಳದಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ಸಾಗಿಸುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ಪೇಸ್ಟ್ ರೂಪದಲ್ಲಿದ್ದ 38 ಬಂಡಲ್ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. 4.14 ಕೆಜಿ ಚಿನ್ನವನ್ನು ಜಪ್ತಿ ಮಾಡಲಾಗಿದ್ದು ಇವುಗಳ ಮೌಲ್ಯ 2.16 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.