ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ತಿರತ್ ಸಿಂಗ್ ರಾವತ್ ಅವರನ್ನು ಆಯ್ಕೆ ಮಾಡಲಾಗಿದೆ.
ಡೆಹ್ರಾಡೂನ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿರತ್ ರಾವತ್ ಅವರನ್ನು ಆಯ್ಕೆ ಮಾಡಲಾಗಿದೆ. ತಿರತ್ 2013ರಿಂದ 2015 ಡಿಸೆಂಬರ್ ವರೆಗೆ ಉತ್ತರಾಖಂಡದ ಬಿಜೆಪಿ ಅಧ್ಯಕ್ಷರಾಗಿದ್ದರು.
2012ರಿಂದ 2017ರವರೆಗೆ ರಾವತ್ ಉತ್ತರಾಖಂಡ ಶಾಸಕಾಂಗ ಸಭೆಯ ಸದಸ್ಯರಾಗಿದ್ದರು. ಅಲ್ಲದೇ ಉತ್ತರಾಖಂಡದ ಮೊದಲ ಶಿಕ್ಷಣ ಸಚಿವರಾಗಿದ್ದರು.