ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ಬೆಟ್ಟದ ಘಾಟ್ ರಸ್ತೆಯಲ್ಲಿ ಚಿರತೆ ಹಾವಳಿ ಜಾಸ್ತಿಯಾಗಿದೆ. 6 ಬೈಕ್ ಸವಾರರ ಮೇಲೆ ಚಿರತೆ ದಾಳಿ ಮಾಡಿದ್ದು, ಅದೃಷ್ಟವಶಾತ್ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಾಟ್ ರಸ್ತೆಯಲ್ಲಿ ಸಾಗುತ್ತಿದ್ದ ವಾಹನ ಸವಾರರ ಮೇಲೆ ಚಿರತೆ ದಾಳಿ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ನಡೆಸಿದ್ದಾರೆ.
ಭಾರೀ ಸಂಖ್ಯೆಯ ಭಕ್ತರು ಕಾಲ್ನಡಿಗೆಯಲ್ಲೇ ತಿರುಮಲ ಬೆಟ್ಟವನ್ನು ಹತ್ತಿ ಸ್ವಾಮಿಯ ದರ್ಶನ ಪಡೆಯುತ್ತಾರೆ. ಬೆಟ್ಟದ ಕಾಡಿನ ಘಾಟ್ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತಂಕ ಎದುರಾಗಿದೆ.