
ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಎರಡು ದಿನ ಬಂದ್ ಮಾಡಲಾಗಿದೆ.
ತಿರುಪತಿ ತಿರುಮಲ ದೇವಸ್ಥಾನಂಗೆ ಸಂಬಂಧಿಸಿದ ಪುರಾತನ ಶ್ರೀ ಗೋವಿಂದರಾಜಸ್ವಾಮಿ ಮಂದಿರದ ಸಿಬ್ಬಂದಿ ಒಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಎರಡು ದಿನಗಳ ಕಾಲ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಲಾಕ್ ಡೌನ್ ಕಾರಣ ಬರೋಬ್ಬರಿ 83 ದಿನಗಳ ನಂತರ ಭಕ್ತರ ದರ್ಶನಕ್ಕೆ ಗುರುವಾರದಿಂದ ಅವಕಾಶ ನೀಡಲಾಗಿತ್ತು. ಈಗ ಗುತ್ತಿಗೆ ನೌಕರರೊಬ್ಬರಿಗೆ ಕೊರೊನಾ ಸೋಂಕು ತಗಲಿರುವ ಹಿನ್ನೆಲೆಯಲ್ಲಿ ಎರಡು ದಿನ ನಿರ್ಬಂಧ ಹೇರಿದ್ದು ಎರಡು ದಿನದ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.