alex Certify ವಿಶ್ವದ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ ದರ್ಶನದ ನಿರೀಕ್ಷೆಯಲ್ಲಿದ್ದ ಭಕ್ತರಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ ದರ್ಶನದ ನಿರೀಕ್ಷೆಯಲ್ಲಿದ್ದ ಭಕ್ತರಿಗೆ ಶಾಕ್

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಎರಡು ದಿನ ಬಂದ್ ಮಾಡಲಾಗಿದೆ.

ತಿರುಪತಿ ತಿರುಮಲ ದೇವಸ್ಥಾನಂಗೆ ಸಂಬಂಧಿಸಿದ ಪುರಾತನ ಶ್ರೀ ಗೋವಿಂದರಾಜಸ್ವಾಮಿ ಮಂದಿರದ ಸಿಬ್ಬಂದಿ ಒಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಎರಡು ದಿನಗಳ ಕಾಲ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಲಾಕ್ ಡೌನ್ ಕಾರಣ ಬರೋಬ್ಬರಿ 83 ದಿನಗಳ ನಂತರ ಭಕ್ತರ ದರ್ಶನಕ್ಕೆ ಗುರುವಾರದಿಂದ ಅವಕಾಶ ನೀಡಲಾಗಿತ್ತು. ಈಗ ಗುತ್ತಿಗೆ ನೌಕರರೊಬ್ಬರಿಗೆ ಕೊರೊನಾ ಸೋಂಕು ತಗಲಿರುವ ಹಿನ್ನೆಲೆಯಲ್ಲಿ ಎರಡು ದಿನ ನಿರ್ಬಂಧ ಹೇರಿದ್ದು ಎರಡು ದಿನದ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...