ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ ಪರಿಣಾಮ ತಿರುಪತಿ ತಿಮ್ಮಪ್ಪನ ದರ್ಶನವನ್ನೂ ಸ್ಥಗಿತಗೊಳಿಸಲಾಗಿತ್ತು. ನಂತರದಲ್ಲಿ ದರ್ಶನ ಪುನಾರಂಭಗೊಂಡಿದ್ದರೂ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ದೇವರ ದರ್ಶನ ಪಡೆಯಲು ಅವಕಾಶ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಟಿಟಿಡಿ ಮಹತ್ವದ ತೀರ್ಮಾನ ಕೈಗೊಂಡಿದೆ.
ದಿನವೂ ಲಕ್ಷಾಂತರ ಸಂಖ್ಯೆಯ ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಬರುತ್ತಾರೆ. ಕೊರೋನಾ ಕಾರಣದಿಂದ ಭಕ್ತರ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ಪ್ರತಿದಿನ ಮೂರು ಸಾವಿರ ಮಂದಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈಗ ಸಾಮಾನ್ಯ ದರ್ಶನ ಪಡೆಯುವ ಭಕ್ತರ ಸಂಖ್ಯೆಯನ್ನು 9 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 300 ರೂ. ಟಿಕೆಟ್ ಖರೀದಿಸಿ ದರ್ಶನ ಪಡೆಯಲು 9 ಸಾವಿರ ಮಂದಿಗೆ ಅವಕಾಶ ನೀಡಲಾಗಿದೆ.
ಇನ್ನು 10 ಸಾವಿರ ರೂ. ಟಿಕೆಟ್ ಖರೀದಿಸುವವರಿಗೆ ಡೈರೆಕ್ಟ್ ದರ್ಶನಕ್ಕೆ ಅವಕಾಶವಿದೆ. ಆನ್ಲೈನ್ ಮೂಲಕ ಹಣ ಪಾವತಿಸಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ.