
ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ.
ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯ ಸರ್ಕಾರದಿಂದಲೇ ಲಸಿಕೆ ಹಣ ಭರಿಸುವ ಘೋಷಣೆ ಮಾಡಲಾಗಿದೆ.
ಜನರ ಮನವೊಲಿಕೆ ಉದ್ದೇಶದಿಂದ ಉಚಿತವಾಗಿ ಕೊರೋನಾ ಲಸಿಕೆ ಭರವಸೆ ನೀಡಲಾಗಿದೆ. ಬಿಹಾರ ರಾಜ್ಯದಲ್ಲಿ ಬಿಜೆಪಿಯಿಂದ ಈ ಭರವಸೆ ನೀಡಿದ್ದು ತಮಿಳುನಾಡಿನಲ್ಲಿ ಎಐಎಡಿಎಂಕೆ ಉಚಿತ ಲಸಿಕೆಯ ಭರವಸೆ ನೀಡಿದೆ ಎಂದು ಹೇಳಲಾಗಿದೆ.