alex Certify ಮಹಡಿಯಿಂದ ಬಿದ್ದ ಬಾಲಕನಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳ ಮೀನಾಮೇಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಡಿಯಿಂದ ಬಿದ್ದ ಬಾಲಕನಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳ ಮೀನಾಮೇಷ

ಎರಡನೇ ಮಹಡಿಯಿಂದ ಬಿದ್ದ ಬಾಲಕನಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಸೌಲಭ್ಯಗಳಿಲ್ಲ ಎಂದು ಹಲವು ಆಸ್ಪತ್ರೆಗಳು ಸತಾಯಿಸಿವೆ ಎಂಬ ಸುದ್ದಿ ಉತ್ತರ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಸದ್ಯ ಬಾಲಕನನ್ನು ಐವತ್ತು ಕಿ.ಮೀ. ದೂರದ ದೆಹಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಒಂದೂವರೆ ವರ್ಷದ ಬಾಲಕ ತನ್ನ ಮನೆಯ ಎರಡನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ, ನಂತರ ಆತನ ಕುಟುಂಬದವರು ಸಮೀಪದ ಗೌತಮಬುದ್ಧ ನಗರದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಗ್ರೇಟರ್ ನೋಯ್ಡಾದ ಅರ್ಧ ಡಜನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಿರಾಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್ ಇಲ್ಲ ಎಂಬ ನೆಪವೊಡ್ಡಿ ಕೆಲವು ಆಸ್ಪತ್ರೆಗಳು ದಾಖಲಿಸಿಕೊಳ್ಳಲು ಹಿಂದೇಟು ಹಾಕಿವೆ ಎನ್ನಲಾಗಿದೆ.

ಬಾಲಕ ದೇವ್ ನನ್ನ ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾದ ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸಿದ ಬಳಿಕ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಆರೋಗ್ಯ ಸ್ಥಿರವಾಗಿದ್ದು ಅಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಲಾಗಿದೆ ಎಂಬ ಸುದ್ದಿ ಅನ್ವಯ ಅಧಿಕಾರಿಗಳು ತನಿಖೆ ನಡೆಸಿದ್ದು, ಬಾಲಕನ ಪೋಷಕರಿಂದ ಮಾಹಿತಿ ಬಯಸಿದ್ದರು. ಆದರೆ ಆಸ್ಪತ್ರೆಗಳು ಚಿಕಿತ್ಸೆಗೆ ನಿರಾಕರಿಸಿದ್ದವು ಎಂಬ ದೂರು ಆಧಾರರಹಿತ ಎಂದು ಅಧಿಕಾರಿಗಳು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...