alex Certify ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ವಾಹನಗಳ ದಾಖಲೆ ಸಿಂಧುತ್ವವನ್ನು ಜುಲೈ 31 ರವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ. ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಮೋಟಾರು ವಾಹನಗಳ ವಿವಿಧ ದಾಖಲೆಗಳ ಸಿಂಧುತ್ವವನ್ನು ಜುಲೈ31 ರವರೆಗೆ ವಿಸ್ತರಣೆ ಮಾಡಿದೆ.

ಲಾಕ್ಡೌನ್ ಜಾರಿಯಾಗಿರುವುದರಿಂದ ಸಾರಿಗೆ ಕಚೇರಿಗಳು ಕಾರ್ಯ ನಿರ್ವಹಿಸುತ್ತಿಲ್ಲ. ಇದರಿಂದ ವಿವಿಧ ಕೆಲಸಗಳಿಗಾಗಿ ಶುಲ್ಕ ಪಾವತಿಸಿ ದಾಖಲೆಗಳನ್ನು ನವೀಕರಿಸಲು ಸಾರ್ವಜನಿಕರಿಗೆ ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಅವಧಿ ಮುಗಿದ ದಾಖಲೆಗಳ ಅವಧಿಯನ್ನು ಮುಂದುವರೆಸಲಾಗಿದೆ.

ಫೆಬ್ರವರಿ 1 ರಿಂದ ದಾಖಲೆಗಳ ಕ್ರಮಬದ್ಧತೆಗೆ ಸಂಬಂಧಿಸಿದಂತೆ ವಿಳಂಬ ಶುಲ್ಕ ವಿಧಿಸುವುದಿಲ್ಲ. ದಾಖಲೆಗಳ ನವೀಕರಣ ಸೇರಿ ವಾಹನಗಳ ವಿವಿಧ ದಾಖಲೆಗಳ ಸಿಂಧುತ್ವ ಜುಲೈ 31 ರವರೆಗೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

ವಾಹನಗಳ ಅರ್ಹತಾ ಪ್ರಮಾಣ ಪತ್ರ, ಪರ್ಮಿಟ್, ಡಿಎಲ್ ಸೇರಿದಂತೆ ಸಾರಿಗೆ ಇಲಾಖೆಯ ಎಲ್ಲಾ ಸೇವೆಗಳಿಗೆ ಫೆಬ್ರವರಿ 1ರ ನಂತರದಲ್ಲಿ ಪಾವತಿಸಿದ ಶುಲ್ಕ ಅವಧಿ ಜುಲೈ 31 ರವರೆಗೆ ಮಾನ್ಯತೆ ಹೊಂದಿರುತ್ತವೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...