ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ಇಂದು ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.
ನಾನು ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ. ವೈದ್ಯರ ಸಲಹೆಯಂತೆ ನಾನು ಐಸೋಲೇಟ್ ಆಗಿದ್ದೇನೆ. ಎಲ್ಲರೂ ಕೊರೊನಾ ಮಾರ್ಗಸೂಚಿಗಳನ್ನ ಪಾಲನೆ ಮಾಡಿ ಹಾಗೂ ಸುರಕ್ಷಿತವಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ದೇಬ್ ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1.15 ಲಕ್ಷ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 1,15,736 ಹೊಸ ಕೊರೊನಾ ಕೇಸ್ಗಳು ವರದಿಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,28,01,785 ರಷ್ಟಾಗಿದೆ.