alex Certify ತ್ರಿಪುರ ಸಿಎಂ ಬಿಪ್ಲಬ್ ಕುಮಾರ್​​​ ದೇಬ್‌ ಗೆ​ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತ್ರಿಪುರ ಸಿಎಂ ಬಿಪ್ಲಬ್ ಕುಮಾರ್​​​ ದೇಬ್‌ ಗೆ​ ಕೊರೊನಾ ಸೋಂಕು

ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್​ ದೇಬ್​​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ಇಂದು ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.‌

ನಾನು ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ. ವೈದ್ಯರ ಸಲಹೆಯಂತೆ ನಾನು ಐಸೋಲೇಟ್​ ಆಗಿದ್ದೇನೆ. ಎಲ್ಲರೂ ಕೊರೊನಾ ಮಾರ್ಗಸೂಚಿಗಳನ್ನ ಪಾಲನೆ ಮಾಡಿ ಹಾಗೂ ಸುರಕ್ಷಿತವಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ದೇಬ್​ ಟ್ವೀಟ್​ ಮಾಡಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1.15 ಲಕ್ಷ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 1,15,736 ಹೊಸ ಕೊರೊನಾ ಕೇಸ್​ಗಳು ವರದಿಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,28,01,785 ರಷ್ಟಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...