ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಅರ್ಚಕರು, ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ದರ್ಶನಕ್ಕೆ ಬರುವ ಭಕ್ತರಿಗೆ ನಿರ್ಬಂಧ ವಿಧಿಸಲು ಟಿಟಿಡಿ ಮುಂದಾಗಿದೆ.
18 ಅರ್ಚಕರು ಸೇರಿದಂತೆ ಟಿಟಿಡಿಯ 158 ಸಿಬ್ಬಂದಿಗೆ ಕೊರೊನಾ ಸೋಂಕು ತಗಲಿದ ಹಿನ್ನೆಲೆಯಲ್ಲಿ ಭಕ್ತರಿಗೆ ದರ್ಶನ ಸ್ಥಗಿತಗೊಳಿಸಲಾಗುವುದು.
20 ದಿನಗಳ ಕಾಲ ದರ್ಶನ ಸ್ಥಗಿತಗೊಳಿಸಲಿದ್ದು, ನಂತರ ಪರಿಸ್ಥಿತಿ ನೋಡಿಕೊಂಡು ಪುನಃ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.