alex Certify ನಟಿ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ, ವಿಡಿಯೋ ಹರಿಬಿಡುವುದಾಗಿ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ, ವಿಡಿಯೋ ಹರಿಬಿಡುವುದಾಗಿ ಬೆದರಿಕೆ

 ಕೊಲ್ಕತ್ತಾ: ಕಿರುತೆರೆ ನಟಿ ಮೇಲೆ ಸ್ನೇಹಿತನೇ ಅತ್ಯಾಚಾರ ಎಸಗಿದ್ದು ದೃಶ್ಯಗಳನ್ನು ಸೆರೆಹಿಡಿದು ಬೆದರಿಕೆ ಹಾಕಿದ್ದಾನೆ.

ಜಾಧವ್ ಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.

ಬಂಗಾಳಿ ನಟಿ ಮತ್ತು ಆರೋಪಿ ಸ್ನೇಹಿತರಾಗಿದ್ದು ಕೆಲವು ವರ್ಷಗಳಿಂದ ಇಬ್ಬರ ನಡುವೆ ಜಗಳವಾಗಿ ದೂರವಾಗಿದ್ದರು. ಲಾಕ್ ಡೌನ್ ಸಂದರ್ಭದಲ್ಲಿ ಫೇಸ್ಬುಕ್ ಮೂಲಕ ನಟಿಯನ್ನು ಸಂಪರ್ಕಿಸಿದ್ದ ಆರೋಪಿ ಭೇಟಿಯಾಗಲು ಬಯಸಿದ್ದಾನೆ. ಆದರೆ, ನಟಿ ಆತನ ಭೇಟಿಗೆ ನಿರಾಕರಿಸಿದ್ದಾಳೆ.

ನಂತರದಲ್ಲಿ ಕಷ್ಟದಲ್ಲಿರುವ ತನಗೆ ನೆರವಾಗುವಂತೆ ಆಕೆಯ ಮನವೊಲಿಸಿದ ಆರೋಪಿ, ನಟಿ ವಾಸವಾಗಿರುವ ಅಪಾರ್ಟ್ ಮೆಂಟ್ ಗೆ ಬಂದಿದ್ದಾನೆ. ಜೂನ್ 5 ರಂದು ಬಿಜೋಯ್ ದಲ್ಲಿರುವ ಅಪಾರ್ಟ್ ಮೆಂಟ್ ಗೆ ಬಂದಿದ್ದ ಆರೋಪಿ ಒಂಟಿಯಾಗಿದ್ದ ನಟಿ ಮೇಲೆ ಅತ್ಯಾಚಾರ ಎಸಗಿ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿದ್ದಾನೆ. ಪೊಲೀಸರಿಗೆ ದೂರು ನೀಡಿದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದಕ್ಕೆ ಎದೆಗುಂದದ ನಟಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...