ಮದುವೆಯ ನೆಪದಲ್ಲಿ ನನ್ನ ಮೇಲೆ ನಿರ್ದೇಶಕರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಟೆಲಿವಿಷನ್ ನಟಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಮುಂಬೈನ ವರ್ಸೋವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಯುಷ್ ತಿವಾರಿ ಎಂದು ಗುರುತಿಸಲಾದ ಆರೋಪಿ ವಿರುದ್ಧ ದೂರು ದಾಖಲಾಗಿದೆ.
ಮದುವೆಯಾಗುತ್ತೇನೆ ಎಂದು ನಂಬಿಸಿದ್ದ ಆರೋಪಿ ನನ್ನ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ನಟಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆರೋಪಿ ಹಾಗೂ ಸಂತ್ರಸ್ತೆ ನಟಿ ನಡುವೆ 2 ವರ್ಷಗಳ ಪರಿಚಯ ಇತ್ತು ಎನ್ನಲಾಗಿದೆ. ಪೊಲೀಸರು ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿದ್ದು ಈವರೆಗೆ ಯಾರನ್ನೂ ಬಂಧಿಸಿಲ್ಲ.
ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ)ದ ಅಡಿಯಲ್ಲಿ ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಪ್ರಕರಣ ಸಂಬಂಧ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ವರ್ಸೋವಾ ಪೊಲೀಸ್ ಠಾಣೆ ಹಿರಿಯ ಅಧಿಕಾರಿ ರಾಘವೇಂದ್ರ ಠಾಕೂರ್ ಮಾಹಿತಿ ನೀಡಿದ್ದಾರೆ.