alex Certify ಮದುವೆಯಾಗುವುದಾಗಿ ನಂಬಿಸಿ ಕಿರುತೆರೆ ನಟಿ ಮೇಲೆ ಅತ್ಯಾಚಾರ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗುವುದಾಗಿ ನಂಬಿಸಿ ಕಿರುತೆರೆ ನಟಿ ಮೇಲೆ ಅತ್ಯಾಚಾರ..!

ಮದುವೆಯ ನೆಪದಲ್ಲಿ ನನ್ನ ಮೇಲೆ ನಿರ್ದೇಶಕರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಟೆಲಿವಿಷನ್​ ನಟಿಯೊಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಮುಂಬೈನ ವರ್ಸೋವಾ ​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಯುಷ್​ ತಿವಾರಿ ಎಂದು ಗುರುತಿಸಲಾದ ಆರೋಪಿ ವಿರುದ್ಧ ದೂರು ದಾಖಲಾಗಿದೆ.

ಮದುವೆಯಾಗುತ್ತೇನೆ ಎಂದು ನಂಬಿಸಿದ್ದ ಆರೋಪಿ ನನ್ನ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ನಟಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆರೋಪಿ ಹಾಗೂ ಸಂತ್ರಸ್ತೆ ನಟಿ ನಡುವೆ 2 ವರ್ಷಗಳ ಪರಿಚಯ ಇತ್ತು ಎನ್ನಲಾಗಿದೆ. ಪೊಲೀಸರು ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿದ್ದು ಈವರೆಗೆ ಯಾರನ್ನೂ ಬಂಧಿಸಿಲ್ಲ.

ಭಾರತೀಯ ದಂಡ ಸಂಹಿತೆ ಸೆಕ್ಷನ್​ 376 (ಅತ್ಯಾಚಾರ)ದ ಅಡಿಯಲ್ಲಿ ಆರೋಪಿ ವಿರುದ್ಧ ಎಫ್​ಐಆರ್​ ದಾಖಲಿಸಿದ್ದೇವೆ. ಪ್ರಕರಣ ಸಂಬಂಧ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ವರ್ಸೋವಾ ಪೊಲೀಸ್​ ಠಾಣೆ ಹಿರಿಯ ಅಧಿಕಾರಿ ರಾಘವೇಂದ್ರ ಠಾಕೂರ್​ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...