alex Certify ಅಪ್ಪಿತಪ್ಪಿಯೂ ಹ್ಯಾಂಡ್ ಸ್ಯಾನಿಟೈಸರ್ ಕಾರಿನಲ್ಲಿಟ್ಟೀರಿ ಜೋಕೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ಪಿತಪ್ಪಿಯೂ ಹ್ಯಾಂಡ್ ಸ್ಯಾನಿಟೈಸರ್ ಕಾರಿನಲ್ಲಿಟ್ಟೀರಿ ಜೋಕೆ…!

ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಮಹಾಮಾರಿಯ ನಿಯಂತ್ರಣಕ್ಕೆ ಲಸಿಕೆ ಇನ್ನೂ ಲಭ್ಯವಾಗದ ಕಾರಣ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಹೊರಗೆ ಹೋಗಿ ಬಂದ ಪ್ರತಿ ಸಂದರ್ಭದಲ್ಲೂ ಸ್ಯಾನಿಟೈಸರ್ ನಿಂದ ಕೈ ತೊಳೆದುಕೊಳ್ಳುವುದು ಅನಿವಾರ್ಯವಾಗಿದೆ.

ಹೀಗೆ ಕೈ ತೊಳೆದುಕೊಳ್ಳಲು ತಂದಿಟ್ಟುಕೊಂಡಿದ್ದ ಸ್ಯಾನಿಟೈಸರ್ ನಿಂದಾಗಿ ಕಾರೊಂದು ಹೊತ್ತಿ ಉರಿದ ಘಟನೆ ಛತ್ತೀಸ್ಗಡದ ರಾಯ್ಪುರದಲ್ಲಿ ನಡೆದಿದೆ. ಇಂದ್ರಾವತಿ ಭವನ್ ಪ್ರವೇಶದಲ್ಲಿ ವ್ಯಕ್ತಿಯೊಬ್ಬ ಹ್ಯಾಂಡ್ ಸ್ಯಾನಿಟೈಸರ್ ಬಳಸಿ ಕಾರಿನ ಒಳಭಾಗವನ್ನು ಸ್ವಚ್ಛಗೊಳಿಸಲು ಮುಂದಾಗಿದ್ದಾನೆ.

ಕಾರು ಬಿಸಿಲಿನಲ್ಲಿ ನಿಲ್ಲಿಸಿದ್ದ ಕಾರಣ ಕಾದ ಹೆಂಚಿನಂತಾಗಿದ್ದು, ಹ್ಯಾಂಡ್ ಸ್ಯಾನಿಟೈಸರ್ ನಲ್ಲಿ ಅತ್ಯಧಿಕ ಪ್ರಮಾಣದ ಆಲ್ಕೋಹಾಲ್ ಇರುವುದರಿಂದ ಇದರ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಈ ದೃಶ್ಯಾವಳಿಗಳ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

— Ananth Rupanagudi (@rananth) May 20, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...