alex Certify ಕ್ವಾರಂಟೈನ್ ಸೆಂಟರ್ ನಲ್ಲಿ ಮಹಿಳೆ ಸ್ನಾನದ ವಿಡಿಯೋ ಮಾಡಿದ ಯುವಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ವಾರಂಟೈನ್ ಸೆಂಟರ್ ನಲ್ಲಿ ಮಹಿಳೆ ಸ್ನಾನದ ವಿಡಿಯೋ ಮಾಡಿದ ಯುವಕರು

ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬೇರೆ ಊರುಗಳಿಂದ ಬಂದವರನ್ನು ಕ್ವಾರಂಟೈನ್ ಸೆಂಟರ್ ನಲ್ಲಿ ಇಡಲಾಗ್ತಿದೆ. ಆದ್ರೆ ಈ ಕ್ವಾರಂಟೈನ್ ಸೆಂಟರ್ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಏಳ್ತಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಕ್ವಾರಂಟೈನ್ ಸೆಂಟರ್ ನಲ್ಲಿ ಸ್ನಾನ ಮಾಡ್ತಿದ್ದ ಮಹಿಳೆ ವಿಡಿಯೋ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಇಬ್ಬರು ಯುವಕರು ಮಹಿಳೆ ವಿಡಿಯೋ ಮಾಡಿದ್ದಾರೆ. ವಿಡಿಯೋ ಮಾಡ್ತಿದ್ದ ಯುವಕರನ್ನು ಮಹಿಳೆ ನೋಡಿದ್ದಾಳೆ. ತಕ್ಷಣ ಮಹಿಳೆ ಕೂಗಿಕೊಂಡಿದ್ದಾಳೆ. ಅಷ್ಟರಲ್ಲಿ ಯುವಕರು ಅಲ್ಲಿಂದ ಓಡಿ ಹೋಗಿದ್ದಾರೆ.

ವಿಡಿಯೋ ಮಾಡಿದ್ದ ಯುವಕರು ಸಂಬಂಧ ಬೆಳೆಸುವಂತೆ ಬೆದರಿಕೆ ಹಾಕಿದ್ದರೆಂದು ಮಹಿಳೆ ದೂರಿದ್ದಾಳೆ. ವಿಡಿಯೋ ವೈರಲ್ ಮಾಡುವುದಾಗಿ ಹೆದರಿಸಿದ್ದರಂತೆ. ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...