alex Certify BIG NEWS: ಸೆಪ್ಟೆಂಬರ್ ವರೆಗೆ ಶಾಲೆ-ಕಾಲೇಜುಗಳಿಗೆ ರಜೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೆಪ್ಟೆಂಬರ್ ವರೆಗೆ ಶಾಲೆ-ಕಾಲೇಜುಗಳಿಗೆ ರಜೆ ಸಾಧ್ಯತೆ

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿಯಲ್ಲಿರುವ ಕಾರಣ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದು, ಸೆಪ್ಟೆಂಬರ್ ವರೆಗೂ ಕಾಲೇಜುಗಳನ್ನು ತೆರೆಯದಂತೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಶಿಫಾರಸ್ಸು ಮಾಡಿದೆ.

ಇದರಿಂದಾಗಿ ಎಸ್ಎಸ್ಎಲ್ಸಿ, ಪಿಯುಸಿ, ವೃತ್ತಿಪರ ಕೋರ್ಸ್ ಗಳವರೆಗೆ ಎಲ್ಲಾ ಪರೀಕ್ಷೆಗಳನ್ನು ಜುಲೈ-ಆಗಸ್ಟ್ ನಲ್ಲಿ ನಡೆಸುವ ಸಾಧ್ಯತೆ ಇದೆ. ವಿಶ್ವವಿದ್ಯಾಲಯ ಮತ್ತು ಉನ್ನತ ಶಿಕ್ಷಣ ಕೇಂದ್ರಗಳ ತರಗತಿಗಳನ್ನು ಸೆಪ್ಟಂಬರ್ ನಲ್ಲಿ ಆರಂಭಿಸಬಹುದು ಎಂದು ಯೋಚಿಸಿ ನೇಮಿಸಿದ ಸಮಿತಿಗಳು ಶಿಫಾರಸು ಮಾಡಿವೆ.

ವಿಶ್ವವಿದ್ಯಾಲಯ ಅನುದಾನ ಆಯೋಗ ನೇಮಿಸಿದ್ದ ಆಯೋಗದ ವತಿಯಿಂದ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಸೆಪ್ಟೆಂಬರ್ ನಿಂದ ತರಗತಿಗಳನ್ನು ಆರಂಭಿಸಬಹುದಾಗಿದೆ ಎಂದು ಶಿಫಾರಸು ಮಾಡಲಾಗಿದೆ. ಲಾಕ್ಡೌನ್ ಜಾರಿ ಮಾಡಿರುವುದರಿಂದ ಶಿಕ್ಷಣ ಸಂಸ್ಥೆಗಳು ಬಂದ್ ಆಗಿವೆ. ಶಾಲೆಗಳಿಗೆ ರಜೆ ನೀಡಿ ಅನೇಕ ಪರೀಕ್ಷೆ ರದ್ದು ಮಾಡಲಾಗಿದೆ. ಮತ್ತೆ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸೆಮಿಸ್ಟರ್ ತರಗತಿಗಳು ಅರ್ಧಕ್ಕೆ ನಿಂತಿವೆ. ಜುಲೈನಿಂದ ತರಗತಿ ಆರಂಭಿಸುವ ಬಗ್ಗೆ ಸಿದ್ಧತೆ ನಡೆಸಲಾಗಿದೆ.

ಯುಜಿಸಿ ನೇಮಿಸಿದ ಸಮಿತಿ ಸೆಪ್ಟೆಂಬರ್ ನಿಂದ ತರಗತಿಗಳನ್ನು ಆರಂಭಿಸುವ ಕುರಿತು ಶಿಫಾರಸು ಮಾಡಿದೆ. ಆನ್ಲೈನ್ ತರಗತಿ ನಡೆಸುವ ಮತ್ತು ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ವರದಿ ನೀಡಲು ಯುಜಿಸಿ ಸಮಿತಿ ರಚಿಸಿದ್ದು ಕೋರೋನಾ ಸಂಕಷ್ಟ ಬಗೆಹರಿದ ಬಳಿಕ ತರಗತಿ ಆರಂಭಿಸಿ ಪರೀಕ್ಷೆ ನಡೆಸುವುದು ಸೂಕ್ತ ಎಂದು ಸಮಿತಿ ಹೇಳಿದೆ. ಆನ್ಲೈನ್ ನಲ್ಲಿ ಶಿಕ್ಷಣ ನೀಡುವ ಬಗ್ಗೆ ಸಲಹೆಗಳನ್ನು ನೀಡಿದ್ದು, ಇದಕ್ಕಾಗಿ ಅಗತ್ಯ ಸೌಕರ್ಯಗಳು ಇರಬೇಕು ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...