alex Certify ಬಿಗ್‌ ನ್ಯೂಸ್: ಅಂತಿಮ ಪರೀಕ್ಷೆ ನಡೆಸಲು ಸಿದ್ಧವೆಂದ UGC | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್: ಅಂತಿಮ ಪರೀಕ್ಷೆ ನಡೆಸಲು ಸಿದ್ಧವೆಂದ UGC

UGC stands firm on conducting final year exams

ವಿಶ್ವವಿದ್ಯಾನಿಲಯಗಳ ಅಂತಿಮ ಪದವಿ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ ( ಯುಜಿಸಿ) ಗುರುವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಜುಲೈ 6 ರ ಮಾರ್ಗಸೂಚಿಗಳನ್ನು ಬದಲಾಯಿಸುವುದಿಲ್ಲ. ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳು ನಡೆಯಲಿವೆ. ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ರಕ್ಷಿಸಲು ಪರೀಕ್ಷೆ ನಡೆಸುವ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಯುಜಿಸಿ ಹೇಳಿದೆ. ಮನಸ್ಸಿಗೆ ಬಂದಂತೆ ಪರೀಕ್ಷೆ ನಡೆಸುವ ನಿರ್ಧಾರ ತೆಗೆದುಕೊಂಡಿಲ್ಲ. ತಜ್ಞರೊಂದಿಗೆ ಚರ್ಚಿಸಲಾಗಿದೆ ಎಂದು ಯುಜಿಸಿ ಹೇಳಿದೆ.

ಅಂತಿಮ ವರ್ಷದ ಪರೀಕ್ಷೆಗಳು ಅನಿವಾರ್ಯವಾಗಿದೆ. ವಿದ್ಯಾರ್ಥಿಗಳಿಗೆ ಜ್ಞಾನದ ಪುರಾವೆ ನೀಡಲು ಇದೊಂದೇ ಮಾರ್ಗ ಎಂದು ಯುಜಿಸಿ ಹೇಳಿದೆ. ಜುಲೈ 31ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯಲಿದೆ.

ಕೋವಿಡ್ -19 ಬಿಕ್ಕಟ್ಟಿನ ಮಧ್ಯೆ ಅಂತಿಮ ವರ್ಷದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಜುಲೈ 28 ರಂದು ಸುಪ್ರೀಂ ಕೋರ್ಟ್ ಯುಜಿಸಿಯಿಂದ ಪ್ರತಿಕ್ರಿಯೆ ಕೋರಿತ್ತು. ಒಂದು ಡಜನ್ ಗೂ ಹೆಚ್ಚು ವಿದ್ಯಾರ್ಥಿಗಳು ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...