
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ಗೆ ದೆಹಲಿಯ ಫೋರ್ಟಿಸ್ ಎಸ್ಕಾರ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವ್ರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ಅವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ರಾಮ್ ವಿಲಾಸ್ ಪಾಸ್ವಾನ್ ಗೆ ಹೃದಯ ಸಮಸ್ಯೆಯಿದೆ. 2017ರಲ್ಲಿ ಅವರು ಲಂಡನ್ ನಲ್ಲಿ ಹೃದಯ ಚಿಕಿತ್ಸೆಗೆ ಒಳಗಾಗಿದ್ದರು. ರಾಮ್ ವಿಲಾಸ್ ಗೆ ಅನೇಕ ಸಮಸ್ಯೆಯಿದೆ. ಹೃದಯ ಸರಿಯಾಗಿ ಕೆಲಸ ಮಾಡ್ತಿಲ್ಲವೆಂದು ವೈದ್ಯರು ಹೇಳಿದ್ದಾರೆ.
ರಾಮ್ ವಿಲಾಸ್ ಪಾಸ್ವಾನ್ 32 ವರ್ಷಗಳಲ್ಲಿ 11 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಈ ಪೈಕಿ ಅವರು 9 ಬಾರಿ ಗೆದ್ದಿದ್ದಾರೆ. ರಾಮ್ ವಿಲಾಸ್ ಪಾಸ್ವಾನ್ ಆರು ಪ್ರಧಾನಿಗಳೊಂದಿಗೆ ಕೆಲಸ ಮಾಡಿದ್ದಾರೆ ಎಂಬುದು ವಿಶೇಷ.