ನವದೆಹಲಿ: ಆಗಸ್ಟ್ 5 ರಿಂದ ಅನ್ಲಾಕ್ 3.0 ಜಾರಿಯಾಗಲಿದೆ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ಲಾಕ್ ಡೌನ್ ಸಡಿಲಿಕೆ ಮೂರನೇ ಹಂತದ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ.
ಜನಸಂದಣಿ ಹೆಚ್ಚಾದ ಪ್ರದೇಶಗಳಲ್ಲಿ ನಿರ್ಬಂಧ ಮುಂದುವರಿಕೆ ಮಾಡಲಾಗಿದೆ. ಜಿಮ್, ಯೋಗ ಕೇಂದ್ರಗಳನ್ನು ತೆರೆಯಲು ಷರತ್ತುಬದ್ಧ ಅನುಮತಿ ನೀಡಲಾಗಿದೆ.
ಸಾಮಾಜಿಕ ಅಂತರ ಪಾಲಿಸುವುದರೊಂದಿಗೆ ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ನೀಡಲಾಗಿದ್ದು ಸೀಮಿತ ಸಂಖ್ಯೆಯ ವಿಮಾನ ಸಂಚಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಶಾಲಾ-ಕಾಲೇಜುಗಳಿಗೆ ಮತ್ತು ಮೆಟ್ರೋ ಸಂಚಾರಕ್ಕೆ ನಿರ್ಬಂಧ ಮುಂದುವರೆಯಲಿದೆ. ಸಿನಿಮಾ ಮಂದಿರ ಓಪನ್ ಆಗುವುದಿಲ್ಲ ಎಂದು ಹೇಳಲಾಗಿದೆ.