ನವದೆಹಲಿ: ಕೊರೊನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ಲಾಕ್ಡೌನ್ ಹಂತಹಂತವಾಗಿ ಸಡಿಲಗೊಳಿಸಿದ ಸರ್ಕಾರ ಅನ್ಲಾಕ್ ಪ್ರಕ್ರಿಯೆಯನ್ನು ಆರಂಭಿಸಿತ್ತು.
ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅನ್ಲಾಕ್ ಪ್ರಕ್ರಿಯೆ 3.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ನೈಟ್ ಕರ್ಫ್ಯೂ ತೆರವುಗೊಳಿಸಲಾಗಿದ್ದು, ಆಗಸ್ಟ್ 5 ರಿಂದ ಜಿಮ್ ಓಪನ್ ಮಾಡಬಹುದಾಗಿದೆ. ವಿಮಾನ ಸಂಚಾರಕ್ಕೆ ಅವಕಾಶ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಮಾರ್ಗಸೂಚಿ ನೀಡಲಾಗಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅನ್ಲಾಕ್ 3.0 ಕುರಿತಾಗಿ ಚರ್ಚೆ ನಡೆಸಿದ್ದು ಇದಾದ ನಂತರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಮುಂದೆ ನೈಟ್ ಕರ್ಫ್ಯೂ ಇರುವುದಿಲ್ಲ ಎಂದು ಹೇಳಲಾಗಿದೆ.