ಕ್ಲಾಸ್ ರೂಂನಲ್ಲಿ ವಿದ್ಯಾರ್ಥಿಗಳ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಪ್ರದೇಶದ ಬುಲಂದರ್ಶಹರ್ ಜಿಲ್ಲೆಯಲ್ಲಿ ನಡೆದಿದೆ.
10 ನೇ ತರಗತಿ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದು ಒಬ್ಬ ವಿದ್ಯಾರ್ಥಿ ತನ್ನ ಸಹಪಾಠಿಯನ್ನ ಗುಂಡಿಕ್ಕಿ ಕೊಂದಿದ್ದಾನೆ.
ಕ್ಲಾಸ್ರೂಂನಲ್ಲಿ ಸೀಟಿಗಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ ಅಂತಾ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೊಲೆಯಾದ ಹಾಗೂ ಕೊಲೆ ಮಾಡಿದ ವಿದ್ಯಾರ್ಥಿಗಳು 14 ವರ್ಷ ವಯಸ್ಸಿನವರಾಗಿದ್ದಾರೆ.
ಹಿಂದಿನ ದಿನ ಇಬ್ಬರು ವಿದ್ಯಾರ್ಥಿಗಳು ಆಸನದ ವಿಚಾರವಾಗಿ ಕಿತ್ತಾಡಿಕೊಂಡಿದ್ದರು. ಇದರಿಂದ ಕೋಪಗೊಂಡಿದ್ದ ಆರೋಪಿ ಸೇನೆಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ರಜೆಗೆಂದು ಮನೆಗೆ ಬಂದಿದ್ದ ಚಿಕ್ಕಪ್ಪ ನ ರಿಲ್ವಾಲ್ವರ್ನ್ನ ಮಾರನೇ ದಿನ ಶಾಲೆಗೆ ತಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿ ವಿದ್ಯಾರ್ಥಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.