alex Certify ಕ್ಲಾಸ್​ ರೂಂನಲ್ಲಿ ನಡೆದ ವಿದ್ಯಾರ್ಥಿಗಳ ಗಲಾಟೆ ಕೊಲೆಯಲ್ಲಿ ಅಂತ್ಯ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಲಾಸ್​ ರೂಂನಲ್ಲಿ ನಡೆದ ವಿದ್ಯಾರ್ಥಿಗಳ ಗಲಾಟೆ ಕೊಲೆಯಲ್ಲಿ ಅಂತ್ಯ…!

ಕ್ಲಾಸ್​ ರೂಂನಲ್ಲಿ ವಿದ್ಯಾರ್ಥಿಗಳ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಪ್ರದೇಶದ ಬುಲಂದರ್​ಶಹರ್​ ಜಿಲ್ಲೆಯಲ್ಲಿ ನಡೆದಿದೆ.

10 ನೇ ತರಗತಿ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದು ಒಬ್ಬ ವಿದ್ಯಾರ್ಥಿ ತನ್ನ ಸಹಪಾಠಿಯನ್ನ ಗುಂಡಿಕ್ಕಿ ಕೊಂದಿದ್ದಾನೆ.

ಕ್ಲಾಸ್​ರೂಂನಲ್ಲಿ ಸೀಟಿಗಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ ಅಂತಾ ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೊಲೆಯಾದ ಹಾಗೂ ಕೊಲೆ ಮಾಡಿದ ವಿದ್ಯಾರ್ಥಿಗಳು 14 ವರ್ಷ ವಯಸ್ಸಿನವರಾಗಿದ್ದಾರೆ.

ಹಿಂದಿನ ದಿನ ಇಬ್ಬರು ವಿದ್ಯಾರ್ಥಿಗಳು ಆಸನದ ವಿಚಾರವಾಗಿ ಕಿತ್ತಾಡಿಕೊಂಡಿದ್ದರು. ಇದರಿಂದ ಕೋಪಗೊಂಡಿದ್ದ ಆರೋಪಿ ಸೇನೆಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ರಜೆಗೆಂದು ಮನೆಗೆ ಬಂದಿದ್ದ ಚಿಕ್ಕಪ್ಪ ನ ರಿಲ್ವಾಲ್ವರ್​ನ್ನ ಮಾರನೇ ದಿನ ಶಾಲೆಗೆ ತಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿ ವಿದ್ಯಾರ್ಥಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...