ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ 35 ವರ್ಷದ ವ್ಯಕ್ತಿಯೊಬ್ಬರು ತಮ್ಮ ಆತ್ಮಹತ್ಯಾ ನೋಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.
ಇಲ್ಲಿನ ಮೌರಾಣಿಪುರ ತಾಲ್ಲೂಕಿನ ರಾಣಿಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ರಾಜೇಶ್, ತನ್ನ ಮಡದಿಯ ಮನೆಯವರಿಂದ ವಿಪರೀತ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ಮಾವ, ಅತ್ತೆ ಹಾಗೂ ನಾದಿನಿ ಬಹಳ ಕಿರುಕುಳ ಕೊಡುತ್ತಿದ್ದ ಕಾರಣ ಈ ನಿರ್ಧಾರಕ್ಕೆ ಬಂದಿದ್ದಾಗಿ ರಾಜೇಶ್ ತಿಳಿಸಿದ್ದಾರೆ.
ಮೃತರ ಸಂಬಂಧಿಕರನ್ನು ತನಿಖೆಗೆ ಒಳಪಡಿಸಿರುವ ಪೊಲೀಸರು, ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.