alex Certify ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಪತ್ನಿ ಕುಟುಂಬದ ಕಿರುಕುಳ ಬಿಚ್ಚಿಟ್ಟ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಪತ್ನಿ ಕುಟುಂಬದ ಕಿರುಕುಳ ಬಿಚ್ಚಿಟ್ಟ ಪತಿ

ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ 35 ವರ್ಷದ ವ್ಯಕ್ತಿಯೊಬ್ಬರು ತಮ್ಮ ಆತ್ಮಹತ್ಯಾ ನೋಟ್ ‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ಇಲ್ಲಿನ ಮೌರಾಣಿಪುರ ತಾಲ್ಲೂಕಿನ ರಾಣಿಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ರಾಜೇಶ್‌, ತನ್ನ ಮಡದಿಯ ಮನೆಯವರಿಂದ ವಿಪರೀತ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ಮಾವ, ಅತ್ತೆ ಹಾಗೂ ನಾದಿನಿ ಬಹಳ ಕಿರುಕುಳ ಕೊಡುತ್ತಿದ್ದ ಕಾರಣ ಈ ನಿರ್ಧಾರಕ್ಕೆ ಬಂದಿದ್ದಾಗಿ ರಾಜೇಶ್ ತಿಳಿಸಿದ್ದಾರೆ.

ಮೃತರ ಸಂಬಂಧಿಕರನ್ನು ತನಿಖೆಗೆ ಒಳಪಡಿಸಿರುವ ಪೊಲೀಸರು, ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...