ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಳಿ ಉತ್ತರಪ್ರದೇಶ ಪೊಲೀಸರು ಕ್ಷಮೆ ಕೋರಿದ್ದಾರೆ.
ನಿನ್ನೆ ನಡೆದ ಘಟನಾವಳಿಗಳ ಬಗ್ಗೆ ಪೊಲೀಸರು ಕ್ಷಮೆ ಯಾಚಿಸಿದ್ದಾರೆ. ಪ್ರಿಯಾಂಕ ಗಾಂಧಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ಪೊಲೀಸ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಅನುಚಿತ ವರ್ತನೆ ತೋರಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನೋಯ್ಡಾ ಪೊಲೀಸ್ ಆಯುಕ್ತರು ಹೇಳಿದ್ದಾರೆ.
ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಕುಟುಂಬದವರ ಭೇಟಿಗೆ ತೆರಳುತ್ತಿದ್ದ ರಾಹುಲ್, ಪ್ರಿಯಾಂಕಾ ಗಾಂಧಿ ಅವರಿಗೆ ಅವಕಾಶ ನೀಡದ ಪೊಲೀಸರ ನಡೆಗೆ ವಿರೋಧ ವ್ಯಕ್ತವಾಗಿತ್ತು.