
ಮಥುರಾ: ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಶನಿವಾರ ಖಾಸಗಿ ಬಸ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ದೆಹಲಿ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ನಲ್ಲಿದ್ದ ಸಿಬ್ಬಂದಿಯೊಬ್ಬ ಮಹಿಳೆ ಮೇಲೆ ಹಲ್ಲೆ ಮಾಡಿದ ನಂತರ ಈ ಕೃತ್ಯ ಎಸಗಲಾಗಿದೆ. ಲಖ್ನೋದಿಂದ ಬರುತ್ತಿದ್ದ ಬಸ್ ನಲ್ಲಿ ಈ ಘಟನೆ ನಡೆದಿದೆ. ಶನಿವಾರ ಬೆಳಗಿನಜಾವ ಮಂತ್ ಟೋಲ್ ಪ್ಲಾಜಾ ಬಳಿ ಬಸ್ ತಲುಪಿದಾಗ 112 ಸಹಾಯವಾಣಿಗೆ ಮಹಿಳೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ.
ಬಸ್ ಕ್ಲೀನರ್ ಕೂಡ ಈ ಬಗ್ಗೆ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದು, ಆರೋಪಿ ಕ್ಲೀನರ್ ರವಿಯನ್ನು ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಯ ಬಳಿಕ ದೆಹಲಿಯ ರೋಹಿಣಿ ಪ್ರದೇಶದಲ್ಲಿರುವ ಮನೆಗೆ ತಲುಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.