alex Certify ವೈದ್ಯಕೀಯ ತಪಾಸಣೆಯಲ್ಲಿ ಗೊತ್ತಾಯ್ತು ಗರ್ಭಿಣಿಯಾದ ರಹಸ್ಯ: ಬಯಲಾಯ್ತು ತಂದೆಯ ನೀಚಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯಕೀಯ ತಪಾಸಣೆಯಲ್ಲಿ ಗೊತ್ತಾಯ್ತು ಗರ್ಭಿಣಿಯಾದ ರಹಸ್ಯ: ಬಯಲಾಯ್ತು ತಂದೆಯ ನೀಚಕೃತ್ಯ

ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಬಾರಾಬಂಕಿಯಲ್ಲಿ 16 ವರ್ಷದ ಪುತ್ರಿಯ ಮೇಲೆ ವ್ಯಕ್ತಿಯೊಬ್ಬ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು ವೈದ್ಯಕೀಯ ತಪಾಸಣೆಯಲ್ಲಿ ವಿಷಯ ಗೊತ್ತಾಗಿ ದೂರು ದಾಖಲಿಸಲಾಗಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ತಪಾಸಣೆ ನಡೆಸಿದ ವೈದ್ಯರು ಬಾಲಕಿ ಗರ್ಭಿಣಿಯಾಗಿರುವ ಬಗ್ಗೆ ತಿಳಿಸಿದ್ದಾರೆ. ಬಾಲಕಿ ತನ್ನ ಚಿಕ್ಕಮ್ಮನ ಜೊತೆಗೆ ಫತೇಪುರ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ.

ಬಾಲಕಿ ತಂದೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...