ಉತ್ತರ ಪ್ರದೇಶದಲ್ಲಿ ಮಹಿಳೆಯರು, ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ದಿನ ದಿನಕ್ಕೂ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗ್ತಿದೆ. ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಏಳು ವರ್ಷದ ಬಾಲಕಿಗೆ ಮಾದಕ ದ್ರವ್ಯವನ್ನು ನೀಡಿ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ.
ಪಕ್ಕದ ಮನೆಯಲ್ಲಿ ವಾಸವಾಗಿದ್ದ ಯುವಕ ಈ ಕೃತ್ಯವೆಸಗಿದ್ದಾನೆ. ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿಗೆ ಆಹಾರದಲ್ಲಿ ಮಾದಕ ದ್ರವ್ಯ ನೀಡಿ ಪ್ರಜ್ಞೆ ತಪ್ಪಿಸಿದ್ದಾನೆ. ನಂತ್ರ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಘಟನೆ ನಂತ್ರ ಅಲ್ಲಿಂದ ಪರಾರಿಯಾಗಿದ್ದಾನೆ.
ಮನೆಗೆ ಬಂದ ಪಾಲಕರಿಗೆ ಅಸ್ವಸ್ಥ ಸ್ಥಿತಿಯಲ್ಲಿದ್ದ ಮಗಳು ಕಾಣಿಸಿದ್ದಾಳೆ. ಮಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.