
ಹರಿದ್ವಾರ: ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಸ್ಥಳೀಯ ಯುವಕರು ಮತ್ತು ಪ್ರವಾಸಿಗರಿಗೆ ಆಮಿಷವೊಡ್ಡಿದ 6 ಲೈಂಗಿಕ ಕಾರ್ಯಕರ್ತೆಯರನ್ನು ಬುಧವಾರ ಬಂಧಿಸಲಾಗಿದೆ.
ಉತ್ತರಾಖಂಡದ ಹರಿದ್ವಾರದಲ್ಲಿ ಲೈಂಗಿಕ ಕಾರ್ಯಕರ್ತೆಯರು ಹಣ ಸಂಪಾದಿಸಲು ಸ್ಥಳೀಯ ಯುವಕರು ಮತ್ತು ಪ್ರವಾಸಿಗರಿಗೆ ಆಮಿಷ ಒಡ್ಡುತ್ತಿರುವುದಾಗಿ ಪೊಲೀಸರಿಗೆ ಮಾಹಿತಿ ಬಂದಿದೆ. ಈ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸರು ರೆಡ್ ಹ್ಯಾಂಡಾಗಿ ಮಹಿಳೆಯರನ್ನು ಬಂಧಿಸಿದ್ದಾರೆ.
ಠಾಣಾಧಿಕಾರಿ ಅಮರ್ ಜಿತ್ ಸಿಂಗ್ ಈ ಬಗ್ಗೆ ಮಾತನಾಡಿ, ಹರಿದ್ವಾರ ನಿವಾಸಿಗಳೇ ಆಗಿರುವ ಆರು ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸಲಾಗಿದೆ. ಅವರಿಗೆ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಹೇಳಿದ್ದಾರೆ.
ಬಾಂಬೆ ಹೈಕೋರ್ಟ್ ವೇಶ್ಯಾವಾಟಿಕೆ ಕಾನೂನಿನ ಪ್ರಕಾರ ಅಪರಾಧವಲ್ಲ. ವಯಸ್ಕ ಮಹಿಳೆಯರು ತಮ್ಮ ವೃತ್ತಿಯನ್ನು ಆಯ್ಕೆಮಾಡಿಕೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ಹೇಳಿದ ವಾರದ ನಂತರ ಹರಿದ್ವಾರದಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.