ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಾರಣಾಸಿಯಲ್ಲಿ ನಶೆ ಪದಾರ್ಥ ನೀಡಿ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಮಿರ್ಜಾಪುರ ಚುನಾರ್ ನಿಂದ ಬಾಲಕಿಯನ್ನು ಅಪಹರಿಸಲಾಗಿತ್ತು.
ಅಪಹರಣಕಾರರು ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ್ದರು. ಸತತ ಎರಡು ತಿಂಗಳ ಕಾಲ ಹುಡುಗಿ ಮೇಲೆ ಅತ್ಯಾಚಾರ ನಡೆದಿದೆ. ಎರಡು ಬಾರಿ ಪೀಡಿತೆ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾಳೆ. ಕೊನೆ ಬಾರಿ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾಳೆ.
ಹುಡುಗಿ ಕಾಣೆಯಾಗಿದ್ದಾಳೆಂದು ಕುಟುಂಬಸ್ಥರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬ್ಯೂಟಿಪಾರ್ಲರ್ ಹುಡುಗಿ ಸೇರಿದಂತೆ ಮೂವರು ಮಹಿಳೆಯರು ಹಾಗೂ 10 ಮಂದಿಯನ್ನು ಬಂಧಿಸಿದ್ದಾರೆ.