ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆದರೆ ಯಾವುದೇ ರೋಗ ಲಕ್ಷಣಗಳು ಇಲ್ಲವೆಂದು ಹೇಳಲಾಗಿದೆ.
ವೆಂಕಯ್ಯ ನಾಯ್ಡು ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆಂದು ಮೂಲಗಳು ತಿಳಿಸಿವೆ.
ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಕುಟುಂಬದ ಇತರೆ ಸದಸ್ಯರಿಗೂ ಪರೀಕ್ಷೆ ನಡೆಸಲಾಗಿದ್ದು, ಅವರ ಪತ್ನಿ ಉಷಾ ನಾಯ್ಡು ಅವರ ವರದಿ ನೆಗೆಟಿವ್ ಬಂದಿದೆ.