ಭಾರತೀಯ ಬ್ಯಾಂಕ್ ಗಳಿಗೆ ಮೋಸ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಉದ್ಯಮಿ ವಿಜಯ್ ಮಲ್ಯ ಅರ್ಜಿ ಪರಿಶೀಲನೆಯನ್ನು ಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದೆ. ಸುಪ್ರೀಂ ಕೋರ್ಟ್ ನಲ್ಲಿದ್ದ ದಾಖಲೆಗಳಲ್ಲಿ ಒಂದು ದಾಖಲೆ ನಾಪತ್ತೆಯಾಗಿರುವುದು ಇದಕ್ಕೆ ಕಾರಣವಾಗಿದೆ. ಇದೊಂದು ಆತಂಕಕಾರಿ ಘಟನೆಯಾಗಿದ್ದು, ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.
ಮಲ್ಯ 2017 ರಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ತಿರಸ್ಕರಿಸಿದ್ದರು. ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ವಿರುದ್ಧವಾಗಿ ತಮ್ಮ ಆಸ್ತಿಯನ್ನು ತಮ್ಮ ಕುಟುಂಬಕ್ಕೆ ವರ್ಗಾಯಿಸಿದ್ದರು. ಈ ಪ್ರಕರಣದ ಕಡತದಲ್ಲಿ ವಿಜಯ್ ಮಲ್ಯಗೆ ಸಂಬಂಧಿಸಿದ ದಾಖಲೆಯೊಂದು ಕಂಡುಬಂದಿಲ್ಲ. ಈ ಕಾರಣದಿಂದ ಗುರುವಾರ ವಿಚಾರಣೆ ನಡೆಸಲು ಸಾಧ್ಯವಾಗಲಿಲ್ಲ.
ಮೂರು ವರ್ಷಗಳ ಹಿಂದೆ ಮಲ್ಯ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ವಿಜಯ್ ಮಲ್ಯ ಹಣವನ್ನು ತಮ್ಮ ಮಕ್ಕಳಿಗೆ ವರ್ಗಾಯಿಸಿದ್ದರು. ಆದ್ದರಿಂದ ವಿಜಯ್ ಮಲ್ಯರನ್ನು ನ್ಯಾಯಾಲಯ ದೋಷಿ ಎಂದಿತ್ತು. ಇದರ ನಂತರ ಮಲ್ಯ, ಸುಪ್ರೀಂ ಕೋರ್ಟ್‌ನಲ್ಲಿ ಈ ತೀರ್ಪನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.