ಭಾರತದ ಬ್ಯಾಂಕುಗಳಿಂದ 9 ಸಾವಿರ ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ ಇದರಿಂದ ಪಾರಾಗಲು ವಿಜಯ್ ಮಲ್ಯ ಕೇಂದ್ರ ಸರ್ಕಾರದ ಮುಂದೆ ಹೊಸ ಆಫರ್ ಇಟ್ಟಿದ್ದಾರೆ.
ವಿಜಯ್ ಮಲ್ಯ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಈ ಸಂಬಂಧ ವಿವರಣೆ ನೀಡಿದ್ದು, ತಮ್ಮ ಸಾಲಕ್ಕೆ ಸಂಬಂಧಿಸಿದಂತೆ 13,960 ಕೋಟಿ ರೂಪಾಯಿಗಳನ್ನು ಪಾವತಿಸಲು ವಿಜಯ್ ಮಲ್ಯ ಸಿದ್ಧರಿದ್ದಾರೆ ಎಂದು ತಿಳಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಜಾರಿ ನಿರ್ದೇಶನಾಲಯ ಅವರ ವಿರುದ್ಧ ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ವಾಪಾಸ್ ಪಡೆಯುವಂತೆ ವಿಜಯ್ ಮಲ್ಯ ಪರ ವಕೀಲರು ನ್ಯಾಯಾಲಯವನ್ನು ಕೋರಿದ್ದಾರೆ. ಕೇಂದ್ರ ಸರ್ಕಾರ ಈ ಕುರಿತು ಯಾವ ನಿಲುವು ತಳೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.