alex Certify BIG NEWS: ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್‌ ಗೆ ಹೃದಯಾಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್‌ ಗೆ ಹೃದಯಾಘಾತ

ತಮಿಳು ಸಿನಿ ಲೋಕದ ಖ್ಯಾತ ಹಾಸ್ಯ ನಟ ವಿವೇಕ್​ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಈ ಕಮಿಡಿಯನ್​ ನಿನ್ನೆಯಷ್ಟೇ ಕೊರೊನಾ ಲಸಿಕೆಯನ್ನ ಪಡೆದಿದ್ದರು.

ಅಲ್ಲದೇ ಎಲ್ಲರೂ ಕೊರೊನಾ ಲಸಿಕೆಯನ್ನ ಪಡೆದುಕೊಳ್ಳಿ ಅಂತಾ ಜನರಲ್ಲಿ ಮನವಿ ಮಾಡಿದ್ದಾರೆ. ಇಂದು ಅನಾರೋಗ್ಯದಿಂದ ಬಳಲುತ್ತಿದ್ದ ವಿವೇಕ್​ಗೆ ಹೃದಯಾಘಾತವಾಗಿದ್ದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವರದಿಗಳ ಪ್ರಕಾರ, ಸಿನಿಮಾ ಶೂಟಿಂಗ್​ನಲ್ಲಿ ನಿರತರಾಗಿದ್ದ 59 ವರ್ಷದ ಈ ನಟನ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ವಿವೇಕ್​​ಗೆ ಹೃದಯಾಘಾತವಾಗಿದೆ ಅನ್ನೋದನ್ನ ಕನ್ಫರ್ಮ್ ಮಾಡಿದ್ದಾರೆ.

ಸದ್ಯ ಈ ಪ್ರತಿಭಾನ್ವಿತ ನಟನನ್ನ ಐಸಿಯುವಿನಲ್ಲಿ ಇರಿಸಲಾಗಿದೆ. ವಿವೇಕ್​ ಅಭಿಮಾನಿಗಳು ಈ ಸುದ್ದಿ ಕೇಳಿ ಶಾಕ್​ ಆಗಿದ್ದು ನೆಚ್ಚಿನ ನಟನ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...