ಕೊಲ್ಕತ್ತಾ: ನವಂಬರ್ ವರೆಗೆ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ಜೊತೆಗೆ ಒಂದು ಕೆಜಿ ಕಡಲೆಕಾಳು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಇದರ ಬೆನ್ನಲ್ಲೇ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಹತ್ವದ ಘೋಷಣೆ ಹೊರಡಿಸಿದ್ದು, ಜೂನ್ 2021 ರ ವರೆಗೆ ಒಂದು ವರ್ಷ ಬಡವರಿಗೆ ಉಚಿತವಾಗಿ ಪಡಿತರ ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ನವಂಬರ್ ವರೆಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ, 5 ಕೆಜಿ ಗೋಧಿ, 1ಕೆಜಿ ಬೇಳೆ-ಕಾಳು ಉಚಿತವಾಗಿ ವಿತರಿಸಲಾಗುವುದು. ಇದಕ್ಕೆ ಪೂರಕವಾಗಿ ಪಶ್ಚಿಮ ಬಂಗಾಳ ಸರ್ಕಾರ ಒಂದು ವರ್ಷ ಬಡವರಿಗೆ ಉಚಿತವಾಗಿ ಪಡಿತರ ವಿತರಣೆ ಬಗ್ಗೆ ಮಾಹಿತಿ ನೀಡಿದೆ.