alex Certify ಪತ್ನಿ ಬೆತ್ತಲೆ ಫೋಟೋ ತೆಗೆದು ಸ್ನೇಹಿತರೊಂದಿಗೆ ಸೆಕ್ಸ್ ಗೆ ಬಲವಂತ, ಆಮೇಲೇನಾಯ್ತು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ ಬೆತ್ತಲೆ ಫೋಟೋ ತೆಗೆದು ಸ್ನೇಹಿತರೊಂದಿಗೆ ಸೆಕ್ಸ್ ಗೆ ಬಲವಂತ, ಆಮೇಲೇನಾಯ್ತು ಗೊತ್ತಾ…?

ಭೋಪಾಲ್: ಪತ್ನಿಯ ಬೆತ್ತಲೆ ಫೋಟೋ ತೆಗೆದು ತನ್ನ ಸ್ನೇಹಿತರಿಗೆ ಕಳುಹಿಸುತ್ತಿದ್ದ ವ್ಯಕ್ತಿ ತನ್ನ ಸ್ನೇಹಿತರೊಂದಿಗೆ ಸರಸವಾಡುವಂತೆ ಪತ್ನಿಗೆ ಕಿರುಕುಳ ನೀಡಿದ್ದಾನೆ. ಇದರಿಂದ ನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಗ್ವಾಲಿಯರ್ ಗೋಸ್ಪುರ್ ಪ್ರದೇಶದಲ್ಲಿ ಘಟನೆ ನಡೆದಿದೆ. ಒಂದು ವರ್ಷ ಹಿಂದೆ ಮದುವೆಯಾಗಿದ್ದು ಕೆಲದಿನಗಳ ಕಾಲ ಪತ್ನಿಯನ್ನು ಚೆನ್ನಾಗಿ ನೋಡಿಕೊಂಡ ಆರೋಪಿ ನಂತರದಲ್ಲಿ ಪತ್ನಿಯ ಬೆತ್ತಲೆ ಫೋಟೋಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದ. ಆ ಫೋಟೋಗಳನ್ನು ತನ್ನ ಸ್ನೇಹಿತರಿಗೆ ಕಳುಹಿಸುತ್ತಿದ್ದ. ಅಲ್ಲದೆ ತನ್ನ ಸ್ನೇಹಿತರೊಂದಿಗೆ ಸರಸವಾಡುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ.

ಪತ್ನಿ ಗಂಡನ ಮಾತು ನಿರಾಕರಿಸಿದ್ದರಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದು ಇದರಿಂದ ಮನನೊಂದ ಪತ್ನಿ ಡೆತ್ ನೋಟ್ ನಲ್ಲಿ ಇದೆಲ್ಲಾ ವಿಷಯ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಡೆತ್ ನೋಟ್ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...