ನವದೆಹಲಿ: ಗಂಡನ ಹೆಸರಿನಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸಿಕೊಂಡು ಅಕ್ರಮ ಸಂಬಂಧ ಹೊಂದಿದ್ದ ಗೆಳೆಯನೊಂದಿಗೆ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದ ಮಹಿಳೆ ವಿರುದ್ಧ ದೂರು ದಾಖಲಾಗಿದೆ.
ಕಳೆದ ಮಾರ್ಚ್ ನಲ್ಲಿ ಲಾಕ್ಡೌನ್ ಜಾರಿಯಾಗಿದ್ದರಿಂದ ಮಹಿಳೆ ಆಸ್ಟ್ರೇಲಿಯಾದಲ್ಲಿ ಉಳಿದುಕೊಂಡಿದ್ದಾರೆ. ಭಾರತಕ್ಕೆ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನಗಳನ್ನು ಲಾಕ್ ಡೌನ್ ಸಮಯದಲ್ಲಿ ಸ್ಥಗಿತಗೊಳಿಸಿದ ಕಾರಣ ಆಸ್ಟ್ರೇಲಿಯಾದಲ್ಲಿದ್ದ ಮಹಿಳೆ ಆಗಸ್ಟ್ 24ರಂದು ಮನೆಗೆ ವಾಪಾಸಾಗಿದ್ದಾಳೆ.
ಮುಂಬೈನಲ್ಲಿ ಕೆಲಸ ಮಾಡುತ್ತಿರುವ ದಂಗಾರ್ಥಿ ಗ್ರಾಮದ 46 ವರ್ಷದ ವ್ಯಕ್ತಿ ತನ್ನ ಪತ್ನಿ ಮತ್ತು ಆಕೆಯ ಗೆಳೆಯ ಸಂದೀಪ್ ಸಿಂಗ್(36) ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾನೆ. ಪತ್ನಿ ಹಾಗೂ ಸಂದೀಪ್ ಸಿಂಗ್ ನಡುವೆ ಅಕ್ರಮ ಸಂಬಂಧವಿದ್ದು, ನಕಲಿ ದಾಖಲೆ ಸೃಷ್ಟಿಸಿ ನನ್ನ ಹೆಸರಲ್ಲಿ ಪಾಸ್ಪೋರ್ಟ್ ಪಡೆದುಕೊಂಡಿದ್ದಾನೆ ಎಂದು ದೂರಲಾಗಿದೆ.
ಅನೇಕ ವರ್ಷಗಳಿಂದ ದಂಪತಿ ಮುಂಬೈನಲ್ಲಿ ನೆಲೆಸಿದ್ದು, ಸಾಂದರ್ಭಿಕವಾಗಿ ಹಿರಿಯರನ್ನು ಭೇಟಿ ಮಾಡಲು ಗ್ರಾಮಕ್ಕೆ ತೆರಳುತ್ತಾರೆ. ಮೇ 18 ರಂದು ಪತಿ ಫಿಲಿಬಿತ್ ಗೆ ಹೋಗಿದ್ದಾಗ ಮನೆಯಲ್ಲಿ ಪತ್ನಿ ಇರಲಿಲ್ಲ. ಇಬ್ಬರು ಆಸ್ಟ್ರೇಲಿಯಾಕ್ಕೆ ಹೋಗಿರುವುದಾಗಿ ಸಂದೀಪ್ ಕುಟುಂಬದವರು ಮಾಹಿತಿ ನೀಡಿದ್ದಾರೆ.
ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲು ತನ್ನ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಪಡೆಯಲಾಗಿದೆ ಎಂಬುದನ್ನು ತಿಳಿಯಲು ಪಾಸ್ಪೊರ್ಟ್ ಕಚೇರಿಗೆ ಅರ್ಜಿ ಸಲ್ಲಿಸಲಾಗಿದೆ. ಅಧಿಕಾರಿಗಳು ಪಾಸ್ಪೋರ್ಟ್ ನೀಡಿರುವುದನ್ನು ಖಚಿತಪಡಿಸಿದ್ದಾರೆ. ಗಂಡನ ಹೆಸರಲ್ಲಿ ಫೆಬ್ರವರಿ 2, 2019 ರಂದು ಗೆಳೆಯನ ಪಾಸ್ಪೋರ್ಟ್ ಪಡೆದುಕೊಂಡಿದ್ದ ಮಹಿಳೆ ಆತನೊಂದಿಗೆ ಆಸ್ಟ್ರೇಲಿಯಾ ಪ್ರವಾಸಕ್ಕೆ ಹೋಗಿದ್ದಾಳೆ. ಆದರೆ, ಲಾಕ್ ಡೌನ್ ಕಾರಣದಿಂದ ಅಲ್ಲೇ ಉಳಿದುಕೊಳ್ಳುವಂತಾಗಿದೆ.
ಗಜ್ರೌಲಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಎಲ್ಐಯು ಇನ್ಸ್ ಪೆಕ್ಟರ್ ಕಾಂಚನ್ ರಾವತ್ ಅವರು ಅನೇಕ ಹಂತಗಳಲ್ಲಿ ತಪಾಸಣೆ ಹೊರತಾಗಿಯೂ ಹೇಗೆ ಪಾಸ್ಪೋರ್ಟ್ ನೀಡಲಾಗಿದೆ ಎಂಬುದರ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.