ಪಂಜಾಬ್ನ ಸಂಗ್ರೂರ್ ಜಿಲ್ಲೆಯ ಜಿಲ್ಲೆಯ 30 ವರ್ಷದ ಮಹಿಳೆ ಹಾಗೂ ಆಕೆಯ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಲ್ಜಿತ್ ಕೌರ್ ಸೋಮವಾರ ಸಂಜೆ ಸರೋನ್ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಆಕೆಯ ಇಬ್ಬರು ಹೆಣ್ಣುಮಕ್ಕಳಾದ ಅಶ್ರ್ನೂರ್ ಕೌರ್ (4) ಹಾಗೂ ವಿರಾಸತ್ ಕೌರ್ (2) ಮೃತದೇಹ ಹಾಸಿಗೆಯ ಮೇಲೆ ಪತ್ತೆಯಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸತ್ಪಾಲ್ ಶರ್ಮಾ ಹೇಳಿದ್ದಾರೆ.
ಮಹಿಳೆಯ ಪತಿ ಕೆಲಸದಿಂದ ಹಿಂದಿರುಗಿದ ವೇಳೆ ಈ ಶವಗಳನ್ನ ಮೊದಲು ನೋಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.