alex Certify ಶಾಕಿಂಗ್: ‌ʼಐಸಿಯುʼವಿನಲ್ಲಿದ್ದ ಯುವತಿ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ‌ʼಐಸಿಯುʼವಿನಲ್ಲಿದ್ದ ಯುವತಿ ಮೇಲೆ ಅತ್ಯಾಚಾರ

ಕ್ಷಯರೋಗದಿಂದಾಗಿ ದೆಹಲಿಯ ಗುರಗಾಂವ್​ ಫೋರ್ಟೀಸ್​ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದ 21 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿದ ದಾರುಣ ಘಟನೆ ಬೆಳಕಿಗೆ ಬಂದಿದೆ. ತನ್ನ ಮೇಲೆ ಅತ್ಯಾಚಾರ ನಡೆದಿದೆ ಅಂತಾ ಸ್ವತಃ ಸಂತ್ರಸ್ತೆ ತನ್ನ ತಂದೆಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾಳೆ. ಹಾಗೂ ಪ್ರಜ್ಞೆ ಬರುತ್ತಿದ್ದಂತೆಯೇ ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಕೈ ಸನ್ನೆ ಮೂಲಕ ಹೇಳಿಕೊಳ್ಳಲು ಯತ್ನಿಸಿದ್ದಾಳೆ.

ಅಕ್ಟೋಬರ್​ 21ರಂದು ಯುವತಿ ಆಸ್ಪತ್ರೆಗೆ ದಾಖಲಾಗಿದ್ದು ಆಕೆಯನ್ನ ವೆಂಟಿಲೇಟರ್​ನಲ್ಲಿ ಇರಿಸಲಾಗಿತ್ತು. ಅತ್ಯಾಚಾರಕ್ಕೊಳಗಾದ ಯುವತಿ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು ಅಂತಾ ಸ್ಥಳೀಯ ಪೊಲೀಸರು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾರೆ.

ಯುವತಿ ತನ್ನ ತಂದೆಗೆ ನೀಡಿರುವ ಪತ್ರದಲ್ಲಿ ಉಲ್ಲೇಖವಾದ ಆರೋಪಿಗಳು ಆಸ್ಪತ್ರೆಯ ಸಿಬ್ಬಂದಿಯಾಗಿದ್ದಾರಾ ಅನ್ನೋದ್ರ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಅ. 21 ಹಾಗೂ 27ರ ನಡುವೆ ಆಕೆ ಮೇಲೆ ದೌರ್ಜನ್ಯ ನಡೆದಿದೆ ಅಂತಾ ಸಂತ್ರಸ್ತೆ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಕೆಯ ವೈದ್ಯಕೀಯ ತಪಾಸಣೆ ನಡೆಸಿ ಅಂತಾ ಕುಟುಂಬಸ್ಥರು ಪೊಲೀಸರ ಬಳಿ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...