ಇಂದೋರ್: ಮಧ್ಯಪ್ರದೇಶದ ಇಂದೋರ್ ವಿಜಯನಗರ್ ನಲ್ಲಿ ಯುವತಿ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದು ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.
ಜೂನ್ 2 ರಂದು ಘಟನೆ ನಡೆದಿದೆ. ಯುವತಿಯ ಮೊಬೈಲ್ ಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಕಿರುಕುಳ ನೀಡುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸುವುದಾಗಿ ಹೇಳಿದ ಮತ್ತೊಬ್ಬ ಆರೋಪಿ ಯುವತಿಯನ್ನು ಕರೆದುಕೊಂಡು ಹೋಗಿದ್ದಾನೆ. ವ್ಯಕ್ತಿಯ ಬಳಿ ಯುವತಿಯನ್ನು ಕರೆದುಕೊಂಡು ಹೋಗುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಪ್ರಕರಣದಲ್ಲಿ ಆರು ಮಂದಿ ಭಾಗಿಯಾಗಿದ್ದಾರೆ. ಗೋಪಾಲ್, ಲಕ್ಕಿ, ಭುವನೇಶ್ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.