ಉತ್ತರಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಚಲಿಸುವ ಬಸ್ ನಲ್ಲೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು ಈ ವೇಳೆ 12 ಪ್ರಯಾಣಿಕರು ಕೂಡ ಬಸ್ ನಲ್ಲಿ ಇದ್ದರು. ಆದರೆ ಅವರೆಲ್ಲಾ ನಿದ್ದೆಗೆ ಜಾರಿದ್ದರು ಎನ್ನಲಾಗಿದೆ.
ಬುಧವಾರ ಬೆಳಗಿನಜಾವ 2 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆ ನಡೆದ ದಿನ ಒಬ್ಬನನ್ನು ಬಂಧಿಸಲಾಗಿದ್ದು, ಗುರುವಾರ ಮತ್ತೊಬ್ಬನನ್ನು ಗೌತಮಬುದ್ಧ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಚಾಲಕರಲ್ಲಿ ಒಬ್ಬನನ್ನು ಬುಧವಾರ ಬಂಧಿಸಲಾಗಿದ್ದು. ಮತ್ತಿಬ್ಬರು ನಾಪತ್ತೆಯಾಗಿದ್ದು ಅವರಿಗಾಗಿ ಶೋಧ ನಡೆಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಪ್ರತಾಪ್ ಗಢದಿಂದ ನೋಯ್ಡಾಕ್ಕೆ ಪ್ರಯಾಣಿಸುತ್ತಿದ್ದ 25 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ. ಬಿಜ್ನೋರ್ ಜಿಲ್ಲೆಯ ಅಮಿತ್ ಅಲಿಯಾಸ್ ಮಯೂರಿ ಎಂಬುವನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿಯನ್ನು ನೋಯ್ಡಾ ಸೆಕ್ಟರ್ 20 ಪೊಲೀಸರ ತಂಡ ಬಂಧಿಸಿದೆ ಎಂದು ಹೇಳಲಾಗಿದೆ.
ಮಹಿಳೆ ತರಕಾರಿ ಮಾರಾಟ ಮಾಡುತ್ತಿದ್ದು ಇಬ್ಬರು ಮಕ್ಕಳೊಂದಿಗೆ ರಾತ್ರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಲಖ್ನೋ -ಮಧುರಾ ಮಾರ್ಗದ ಇಬ್ಬರು ಚಾಲಕರು ನಿರ್ವಹಿಸುವ ಬಸ್ ನಲ್ಲಿ ಪ್ರಯಾಣಿಸುವಾಗ ಒಬ್ಬ ಚಾಲಕನಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಬಸ್ ಹಿಂಭಾಗದ ಸೀಟಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು ಕೂಗಾಡಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ದೂರಲಾಗಿದೆ.