alex Certify ಮನೆ ಬಾಗಿಲು ಒಡೆದು ಒಳಹೋದಾಗ ಕಂಡುಬಂದ ದೃಶ್ಯ ನೋಡಿ ಬೆಚ್ಚಿಬಿದ್ದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಬಾಗಿಲು ಒಡೆದು ಒಳಹೋದಾಗ ಕಂಡುಬಂದ ದೃಶ್ಯ ನೋಡಿ ಬೆಚ್ಚಿಬಿದ್ದ ಪೊಲೀಸರು

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ತಮ್ಮ ಪತಿಯನ್ನು ಚಾಕುವಿನಿಂದ ಹಲವು ಬಾರಿ ಇರಿದು ಹತ್ಯೆ ಮಾಡಿರುವುದಲ್ಲದೆ ಬಳಿಕ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆತ್ಮಹತ್ಯೆ ನೋಟ್ ಬರೆದಿಟ್ಟು ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ದೆಹಲಿಯ ಛತ್ತರ್ಪೂರ್ ಏರಿಯಾದಲ್ಲಿ ಭಾನುವಾರದಂದು ಈ ಘಟನೆ ನಡೆದಿದ್ದು, ಮಹಿಳೆಯ ಫೇಸ್ಬುಕ್ ನೋಡಿದ ಸ್ನೇಹಿತರು ಮನೆ ಮಾಲೀಕನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆತ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮನೆ ಬಾಗಿಲು ಒಡೆದು ಒಳ ಪ್ರವೇಶಿಸಿ ಅಲ್ಲಿ ಕಂಡು ಬಂದ ದೃಶ್ಯಕ್ಕೆ ಬೆಚ್ಚಿಬಿದ್ದಿದ್ದಾರೆ.

ಮನೆ ತುಂಬಾ ರಕ್ತ ಚೆಲ್ಲಾಡಿದ್ದು, 36 ವರ್ಷದ ರೇಣುಕಾ ಹಾಗೂ 37 ವರ್ಷದ ಆಕೆಯ ಪತಿ ಚಿರಾಗ್ ಶರ್ಮಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿರಾಗ್ ಶರ್ಮಾ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾನೆ. ರೇಣುಕಾ ಹಾಗೂ ಚಿರಾಗ್ ಪ್ರೀತಿಸಿ 2013 ರಲ್ಲಿ ಮದುವೆಯಾಗಿದ್ದರು ಎಂದು ಹೇಳಲಾಗಿದ್ದು, ಆದರೆ ಬಹು ಕಾಲವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿಯೇ ಪದೇ ಪದೇ ಇಬ್ಬರು ಜಗಳವಾಡುತ್ತಿದ್ದು, ಭಾನುವಾರ ವಿಪರೀತಕ್ಕೆ ಹೋಗಿ ಘೋರ ಕೃತ್ಯ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...